Wednesday, March 12, 2025
Google search engine
HomeNewsಮದುವೆ ಮನೆಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿ ನಿಷೇಧ : High Court.!
spot_img
spot_img
spot_img
spot_img
spot_img

ಮದುವೆ ಮನೆಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿ ನಿಷೇಧ : High Court.!

ಬೆಂಗಳೂರು : ಮದುವೆ ಆರತಕ್ಷತೆಗಳಲ್ಲಿ ಇನ್ಮೂಂದೆ ಅರ್ಧ ಲೀಟರ್ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ.

ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್, ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ, ಮದುವೆ ಸಮಾರಂಭದಲ್ಲಿ, ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ತಿಳಿಸಿದೆ.

ಇದನ್ನು ಓದಿ : ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ – ಬಾಲಕಿ.!

ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳು ಅಗತ್ಯವೆಂದು ನ್ಯಾಯಾಲಯ ಹೇಳಿದೆ. 100 ಕ್ಕೂ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಸಲು ಪರವಾನಗಿ ಅಗತ್ಯ ಇದೆ ಎಂದು ಕೋರ್ಟ್ ಆದೇಶಿಸಿದೆ.

ಗುಡ್ಡಗಾಡು ಪ್ರದೇಶಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. 100 ಕ್ಕೂ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಸಲು ಪರವಾನಗಿ ಅಗತ್ಯ ಎಂದು ಅದು ಹೇಳಿದೆ. ಸ್ಥಳೀಯ ಸ್ವ-ಆಡಳಿತ ಸಂಸ್ಥೆಗಳು ಈ ಪರವಾನಗಿಗಳನ್ನು ನೀಡುವ ಅಧಿಕಾರವನ್ನು ಹೊಂದಿವೆ.

ಕರ್ನಾಟಕದಲ್ಲೂ ಈ ನಿಯಮ ಅನ್ವಯವಾಗಲಿ ಎನ್ನುವುದು ಪರಿಸರ ಪ್ರೇಮಿಗಳ ಆಶಯ.

RELATED ARTICLES
Most Popular

Recent Comments

- Advertisment -
Google search engine
error: Content is protected !!