ಡೆಸ್ಕ್ : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ (Mahakumbha Mela) ಪುಣ್ಯ ಸ್ನಾನ (holy bath) ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಹೋಗುತ್ತಿದ್ದ ಸಂದರ್ಭ ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ (terrible accident) ಸಂಭವಿಸಿ ಕರ್ನಾಟಕ ಮೂಲದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಿರಾಜಾಪೂರ್ ಜಿಲ್ಲೆಯ ರೂಪಾಪೂರ (Rupapur in Mirajapur district) ಸಮೀಪ ಈ ಅಪಘಾತ ಸಂಭವಿಸಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : ತಾಯಿಯ ಕಪಾಳಕ್ಕೆ ಹೊಡೆದ ಸಬ್ ಇನ್ಸ್‌ಪೆಕ್ಟರ್ ; FIR ದಾಖಲು.!
ಬೀದರ್ ನಗರದ ಲಾಡಗೇರಿ ಬಡಾವಣೆಯ (Ladageri Barangay of Bidar Nagar) ನಿವಾಸಿಗಳಾದ ಸುನೀತಾ (35), ಸಂತೋಷ್ (43), ನೀಲಮ್ಮ (60) ಸೇರಿದಂತೆ ಆರು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ಬೆಳಿಗ್ಗೆ ಭಕ್ತರಿದ್ದ ಕ್ರೂಸರ್, ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ (cruiser and truck) ಹೊಡೆದಿದೆ ಎನ್ನಲಾಗಿದೆ.
ಇದನ್ನು ಓದಿ : ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ : ಕಾನೂನು ಕಾಲೇಜು ಉಪಪ್ರಾಂಶುಪಾಲರು ಸೇರಿ ಮೂವರ ಬಂಧನ̤!
ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
Recent Comments