ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರೈಲರ್ ಒಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 20 ಜನರಿಗೆ ಗಾಯವಾಗಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ
ಕಪ್ಪಲುಗುದ್ದಿಯ ಸಮೀಪದಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಒಂದು ಪಲ್ಟಿಯಾಗಿದೆ.
ಅಪಘಾತಕ್ಕೀಡಾದ ಟ್ರ್ಯಾಕ್ಟರ್ ವಿಜಯಪುರ ಜಿಲ್ಲೆಯ ಬಬಲಾದಿ ಜಾತ್ರೆಗೆ ಮುಗಿಸಿ ಪುನಃ ಊರಿಗೆ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ರಾಯಭಾಗ ತಾಲೂಕಿನ ಕಪ್ಪಲುಗುದ್ದಿ ಗ್ರಾಮದ ಸಮೀಪದಲ್ಲಿ ಟ್ರ್ಯಾಕ್ಟರ್ ಬರುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಟ್ರೈಲರ್ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅನೇಕರಿಗೆ ಗಾಯಗಳಾಗಿವೆ.
ಇನ್ನು ಈ ದುರಂತದಲ್ಲಿ ಮೃತರಾದ ದುರ್ದೈವಿಗಳನ್ನು ರಾಯಭಾಗ ತಾಲ್ಲೂಕಿನ ಮಂಟೂರ ಗ್ರಾಮದವರು ಎಂಬುದಾಗಿ ಹೇಳಲಾಗುತ್ತಿದೆ.
ಈ ಅಪಘಾತದಲ್ಲಿ ಸುಮಾರು 20 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುವ ಬಗ್ಗೆ ತಿಳಿದು ಬಂದಿದೆ.
ಈ ಅಪಘಾತಕ್ಕೆ ಸಂಬಂಧಿಸಿದಂತೆ ಹಾರೋಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments