ರಾಮನಗರ : ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿಯ ಮುಖಂಡನ ವಿರುದ್ಧ, ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
BJP ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Read it : 1924 ರ ಕಾಂಗ್ರೆಸ್ ಅಧಿವೇಶನದಲ್ಲಿ ಕನ್ನಡವೇ ಮೆರೆಯಿತು ; 2024 ರಲ್ಲಿ ಅದೇ ಕನ್ನಡ ಮರೆತೇ ಹೋಯಿತು.!
ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇದೆ ಎಂದು ಸಾಲ ಕೊಡಿಸುವ ಭರವಸೆ ನೀಡಿದ್ದರಂತೆ ಚಲುವರಾಮು.
ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿ, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದಾರೆ.
ಬಳಿಕ ಮತ್ತು ಬರಿಸಿ ಲಾಡ್ಜ್ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ನಾನು ತಡೆಯಲು ಪ್ರಯತ್ನಿಸಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾನೆ.
Read it : Astrology : ಡಿಸೆಂಬರ್ 28ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಈ ಘಟನೆ ನಡೆದ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದನಂತೆ. ನಿನ್ನ ಖಾಸಗಿ ವಿಡಿಯೋ ಇದೆ. ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಈ ದೂರಿನ ಮೇರೆಗೆ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
Recent Comments