ಮಂಡ್ಯ : ಮಂಡ್ಯದಲ್ಲೊಂದು ಕಾರು ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : Astrology : ಡಿಸೆಂಬರ್ 21ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ರಾಷ್ಟ್ರೀಯ ಹೆದ್ದಾರಿ 209ರಲ್ಲಿ KSRTC ಬಸ್ ಓವರ್‌ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.
ಈ ದುರ್ಘಟನೆಯಲ್ಲಿ ಪ್ರಣವ್, ಆಕಾಶ್ ಮತ್ತು ಆದರ್ಶ್ ಎಂಬ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇನ್ನೋರ್ವ ವಿದ್ಯಾರ್ಥಿಯಾದ ಪೃಥ್ವಿ ಎಂಬುವವನಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಪೃಥ್ವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : Astrology : ಡಿಸೆಂಬರ್ 22ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಮೂಲಗಳ ಪ್ರಕಾರ, ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡಿಗೆ ಪ್ರವಾಸಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ.
ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Recent Comments