ಸೂರತ್ : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (CISF) ಸೇರಿದ ಯೋಧರೊಬ್ಬರು ಸೂರತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (International airport) ದಲ್ಲಿ ತನ್ನ ಸೇವಾ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಸಿಐಎಸ್ಎಫ್ (CISF) ಸಿಬ್ಬಂದಿಯನ್ನು ಕಿಸಾನ್ ಸಿಂಗ್ (Kisan sing) (32) ಎಂದು ಗುರುತಿಸಲಾಗಿದೆ.
Read it : Astrology : ಜನವರಿ 04ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಇಂದು (ಶನಿವಾರ ದಿ.04) ಮಧ್ಯಾಹ್ನ 2.10ರ ಸುಮಾರಿಗೆ ವಿಮಾನ ನಿಲ್ದಾಣದ ವಾಶ್‌ರೂಮ್ (Wash room) ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಯೋಧ service ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿಕೊಂಡ ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿನ ವೈದ್ಯರು (Doctor) ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇನ್ನು ಯೋಧ ಈ ರೀತಿ ಆತ್ಮಹತ್ಯೆಗೆ ಶರಣಾಗಿರುವುದೇಕೆ ಎಂಬ ಬಗ್ಗೆ ನಿಖರ ಕಾರಣ (Reason) ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ಅಧಿಕಾರಿಗಳು ತಿಳಿಸಿದ್ದಾರೆ.
Recent Comments