ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ (Channarayapatna of Hassan district) ತಾಲ್ಲೂಕಿನ ಅಮಾನಿಕೆರೆ ಸಮೀಪ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ಸಾವನ್ನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ (serious injuries) ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ರಾಕೇಶ್ (28) ಹಾಗೂ ಮೋಕ್ಷಿತ್ ಗೌಡ (8) ಎಂದು ತಿಳಿದು ಬಂದಿದೆ. ಆಶಾ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : Astrology : ಡಿಸೆಂಬರ್ 02ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಈ ಮೂವರು ಕಾರಿನಲ್ಲಿ ಚನ್ನರಾಯಪಟ್ಟಣದಿಂದ ಶ್ರವಣೇರಿ ಗ್ರಾಮಕ್ಕೆ ಹೋಗುತ್ತಿದ್ದರು (He was going to Sravaneri village from Channarayapatna) ಎಂಬ ಮಾಹಿತಿ ಲಭ್ಯವಾಗಿದೆ.
ಅಮಾನಿಕೆರೆ ಸಮೀಪ ಹೋಗುತ್ತಿದ್ದ ವೇಳೆ ಬ್ರೇಕ್ ಫೇಲ್ ಆದ ಕಾರು (car with brake failure) ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ಮರಕ್ಕೆ ಹೊಡೆದಿದೆ ಎನ್ನಲಾಗಿದೆ.
ಇದನ್ನು ಓದಿ : ದುರುಳರಿಂದ ಉದ್ಯಮಿಯ ಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ಪರಿಣಾಮ ತಂದೆ- ಮಗ ಸ್ಥಳದಲ್ಲೇ (Father and son died on the spot) ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಚನ್ನರಾಯಪಟ್ಟಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Recent Comments