ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನು ಓದಿ : Facebook ಲವರ್ ಜೊತೆ ಓಡಿ ಹೋದ ಎರಡು ಮಕ್ಕಳ ತಾಯಿ ; ವಿಡಿಯೋ ವೈರಲ್.!
ರನ್ಯಾ ರಾವ್ ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು. ಈಕೆ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿ ಎನ್ನಲಾಗಿದೆ.
ರನ್ಯಾ ದುಬೈನಿಂದ ಬೆಂಗಳೂರಿಗೆ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್‌ಐ ಅಧಿಕಾರಿಗಳು ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ (The actress has been detained and interrogated).
ಇದನ್ನು ಓದಿ : ರಾಯಭಾಗ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ; ಇಬ್ಬರು ಸಾವು, 20 ಜನರಿಗೆ ಗಾಯ.!
ಸುಮಾರು 15 ಕೆಜಿ ಚಿನ್ನ ಅಕ್ರಮ ಸಾಗಾಟ ಆರೋಪದಲ್ಲಿ ನಟಿ ರನ್ಯಾ ರಾವ್ ರನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Recent Comments