ಬೆಳಗಾವಿ : ಬೆಳಗಾವಿಯ ಶಹಾಪುರದ (Shahpur, Belagavi) ನವಿಗಲ್ಲಿಯಲ್ಲಿ ಯುವಕನೋರ್ವ ಪ್ರೇಯಸಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ (Committed to suicide) ಘಟನೆ ನಡೆದಿದೆ.
ಪ್ರಿಯಕರ ಪ್ರಶಾಂತ್ ಕುಂಡೇಕರ (29) ತನ್ನ ಪ್ರೇಯಸಿ ಐಶ್ವರ್ಯಾ (18) ಳನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ Actress.!
ಇಂದು (ಮಾರ್ಚ್ 04) ಚಿಕ್ಕಮ್ಮನ ಮನೆಗೆ ಬಂದಿದ್ದ ಐಶ್ವರ್ಯಾ ಹಾಗೂ ಪ್ರಶಾಂತ್ ವಿಷ ಸೇವಿಸಿ ಸಾಯಲು ಯತ್ನಿಸಿದ್ದಾರೆ.
ನಂತರ ಚಾಕುವಿನಿಂದ ಪ್ರೇಯಸಿ ಐಶ್ವರ್ಯಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕತ್ತು ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಇದನ್ನು ಓದಿ : ರಾಯಭಾಗ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ; ಇಬ್ಬರು ಸಾವು, 20 ಜನರಿಗೆ ಗಾಯ.!
ಐಶ್ವರ್ಯಾ ಹಾಗೂ ಪ್ರಶಾಂತ್ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು (Both are in love with each other), ಇವರಿಬ್ಬರು ಇಂದು ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿರುವ ಐಶ್ವರ್ಯಾಳ ಚಿಕ್ಕಮ್ಮನ ಮನೆ ಬಂದಿದ್ದರು.
ಆದರೆ ಏನಾಯ್ತೋ ಅಂತ ಗೊತ್ತಿಲ್ಲ. ಇದ್ದಕ್ಕಿದ್ದಂತೆ ಇಬ್ಬರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬಳಿಕ ಪ್ರಶಾಂತ್ ಚಾಕುವಿನಿಂದ ಐಶ್ವರ್ಯಳ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಬಳಿಕ ಪ್ರಕಾಶ್ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ.
ಇದನ್ನು ಓದಿ : ಮಾರ್ಕೆಟ್ನಲ್ಲಿ ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಮಹಿಳೆ ಮಾಡಿದ್ದೇನು ಗೊತ್ತೇ.? ಈ ವಿಡಿಯೋ ನೋಡಿ.!
ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಸಹ ಸ್ಥಳಕ್ಕೆ ಭೇಟಿ ನೀಡಿದರು ಎಂದು ತಿಳಿದು ಬಂದಿದೆ.
Recent Comments