ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಖಣದಾಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.
ಎರಡು ಕುಟುಂಬಗಳ ನಡುವೆ ನಡೆದ ಮಾರಾಮಾರಿಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನು ಓದಿ : Belagaviಯಲ್ಲಿ ಪ್ರತಿಭಟನೆ ಜೋರು : ಚಾಲಕರ ಕೈ ಕಟ್ಟಿಹಾಕಿದ ರೈತರು.!
ಈ ಎರಡು ಕುಟುಂಬದ ಸದಸ್ಯರು ಆಯುಧಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಮುಗಳಖೋಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗೋಪಾಲ ಮತ್ತು ಸುರೇಶ ಎಂಬುವವರ ವಿರುದ್ಧ ಹಲ್ಲೆ ಮಾಡಿರುವ ಆರೋಪಗಳು ಕೇಳಿ ಬಂದಿವೆ.
Recent Comments