ಬೆಳಗಾವಿ : ಪ್ರಸಾದ್ ಯೋಜನೆ ಅಡಿಯಲ್ಲಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ (Yallamma Temple, Savadatti) ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಅನುಮೋದನೆ ನೀಡಿದರು.
‘₹18.37 ಕೋಟಿ ವೆಚ್ಚದಲ್ಲಿ ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳನ್ನು ದೇವಸ್ಥಾನದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಇದನ್ನು ಓದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ Actress.!
ಇದರಿಂದಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಅನುಕೂಲವಾಗಲಿದೆ’ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Union Culture and Tourism Minister Gajendra Singh Shekhawat) ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿಂಗ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪ್ರಸಾದ್ ಯೋಜನೆ ಅಡಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು.
ಇದನ್ನು ಓದಿ : ಮಾರ್ಕೆಟ್‌ನಲ್ಲಿ ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಮಹಿಳೆ ಮಾಡಿದ್ದೇನು ಗೊತ್ತೇ.? ಈ ವಿಡಿಯೋ ನೋಡಿ.!
ಈ ಉಪಕ್ರಮವು ತೀರ್ಥಯಾತ್ರೆಯ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ’ ಎಂದು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
Recent Comments