ಮಂಡ್ಯ : ಮಂಡ್ಯದ (Mandya) ಯಲಿಯೂರು ಸಮೀಪ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಾವಿಗೀಡಾದವರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳಾದ (Residents of Ganjam, Srirangapatna) ಮಾಸ್ತಪ್ಪ, ಅವರ ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ತಿಳಿದು ಬಂದಿದೆ. ಚಂದಗಾಲು ಬಳಿ ನಾಲೆ ಏರಿ ಮೇಲೆ ಆಟೋ ನಿಲ್ಲಿಸಿ ಮೊದಲು ದಂಪತಿ ಮತ್ತು ಮಗಳು ವಿಷ (poison) ಸೇವಿಸಿದ್ದಾರೆ. ಬಳಿಕ ವಿ. ಸಿ. ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿ : ಸಿಸೇರಿಯನ್ ಬಳಿಕ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ Doctors.!
ಮಾಸ್ತಪ್ಪ ಆಟೋ ಡ್ರೈವರ್ ಆಗಿದ್ದು, ಸುಮಾರು 3 ಲಕ್ಷ ರೂಪಾಯಿ ಕೈಸಾಲ (3 lack loan) ಮಾಡಿಕೊಂಡಿದ್ದರು. ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದಕ್ಕೆ ನೊಂದು, ಕುಟುಂಬದೊಂದಿಗೆ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಾಸ್ತಪ್ಪ 3 ಲಕ್ಷ ರೂ. ಕೈಸಾಲ ಸೇರಿದಂತೆ ಸುಮಾರು 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟದಿಂದ (creditors) ಮನೆ ಮಾರಲು ಮುಂದಾಗಿದ್ದರು ಎನ್ನಲಾಗಿದೆ.
ಇದನ್ನು ಓದಿ : Video : ಮೇಲಿನಿಂದ ಬೀಳುತ್ತಿದ್ದ ನಾಯಿಯನ್ನು ರಕ್ಷಿಸಿದ ಮಹಿಳೆ ; ಶಹಬ್ಬಾಸ್ ಎಂದ ನೆಟ್ಟಿಗರು.!
ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments