ಬೆಳಗಾವಿ : KSRTC ಬಸ್ ಕಂಡಕ್ಟರ್ ವಿರುದ್ಧ ನೀಡಿರುವ ಪೋಕ್ಸೋ (POCSO) ದೂರನ್ನು ವಾಪಸ್ ಹಿಂಪಡೆದಿದ್ದೇವೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಹೇಳಿದ್ದಾರೆ.
ನಾವು ಕೂಡ ಕನ್ನಡಿಗರೇ, ಈ ವಿಚಾರದಲ್ಲಿ ಕನ್ನಡ- ಮರಾಠಿಗರ ನಡುವೆ ಜಗಳ ಆಗುತ್ತಿದೆ. ಕಂಡಕ್ಟರ್ ಮಹಾದೇವಪ್ಪ ಅವರ ಮೇಲೆ ನೀಡಿದ್ದ ದೂರನ್ನು ಹಿಂಪಡೆದಿದ್ದೇವೆ (We have withdrawn the complaint) ಎಂದು ಸಂತ್ರಸ್ತೆಯ ತಾಯಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇದನ್ನು ಓದಿ : ಸಿಸೇರಿಯನ್ ಬಳಿಕ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ Doctors.!
ನಮ್ಮ ಮಗಳು ಹಾಗೂ ಮಗ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಬಸ್ನಲ್ಲಿ ಟಿಕೆಟ್ ವಿಚಾರವಾಗಿ ಜಗಳವಾಗಿದೆ.
ಈ ವೇಳೆ ಕನ್ನಡ, ಮರಾಠಿಗರ ಗಲಾಟೆ ಅಂತ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಇದರಿಂದ ಮಹಾರಾಷ್ಟ್ರ, ಕರ್ನಾಟಕದ ನಡುವೆ ಜಗಳ ಶುರುವಾಗಿದೆ. ಭಾಷೆ ಮರಾಠಿ ಆಗಿದ್ದರೂ, ನಾವು ಕನ್ನಡಿಗರೇ. ಇದರಿಂದ ನಮಗೂ ಬೇಸರವಾಗಿದೆ ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.
ಇದನ್ನು ಓದಿ : ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ : ಕಾನೂನು ಕಾಲೇಜು ಉಪಪ್ರಾಂಶುಪಾಲರು ಸೇರಿ ಮೂವರ ಬಂಧನ̤!
ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವ ಇಚ್ಛೆಯಿಂದ ಕೇಸ್ ಹಿಂಪಡೆದಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಅವರು ಹೇಳಿದ್ದಾರೆ.
Recent Comments