Wednesday, March 12, 2025
Google search engine
HomeNewsಮಹಾಕುಂಭ ಮೇಳ : ಮೈಸೂರು - ತುಂಡ್ಲಾ ನಡುವೆ ಬೆಳಗಾವಿ ಮೂಲಕ ವಿಶೇಷ ಎಕ್ಸ್‌ಪ್ರೆಸ್‌ ರೈಲು.!
spot_img
spot_img
spot_img
spot_img
spot_img

ಮಹಾಕುಂಭ ಮೇಳ : ಮೈಸೂರು – ತುಂಡ್ಲಾ ನಡುವೆ ಬೆಳಗಾವಿ ಮೂಲಕ ವಿಶೇಷ ಎಕ್ಸ್‌ಪ್ರೆಸ್‌ ರೈಲು.!

ಬೆಳಗಾವಿ : ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 06217 ಮೈಸೂರು-ತುಂಡ್ಲಾ ವಿಶೇಷ ಎಕ್ಸ್‌ಪ್ರೆಸ್‌ ರೈಲು ಫೆ.17 ರಂದು (ಸೋಮವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 20, 2025 ರಂದು (ಗುರುವಾರ) ಬೆಳಿಗ್ಗೆ 9:30 ಗಂಟೆಗೆ ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣ ತಲುಪಲಿದೆ.

ಪುನಃ ಇದೇ ರೈಲು (06218) ಫೆ. 21 ರಂದು (ಶುಕ್ರವಾರ) ತುಂಡ್ಲಾ ನಿಲ್ದಾಣದಿಂದ ಬೆಳಿಗ್ಗೆ 11:30 ಗಂಟೆಗೆ ಹೊರಟು, ಭಾನುವಾರ (ಫೆ.23, 2025) ರಾತ್ರಿ 10 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ,ರಾಯಬಾಗ, ಕುಡಚಿ, ಮೀರಜ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಪಿಪಾರಿಯಾ, ನರಸಿಂಗ್ಪುರ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್, ಫತೇಪುರ್, ಗೋವಿಂದಪುರಿ, ಇಟಾವಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ಎಕ್ಸ್‌ಪ್ರೆಸ್‌ ರೈಲಿನಲ್ಲಿ 3 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್ / ಡಿ ಬೋಗಿಗಳು ಸೇರಿದಂತೆ 17 ಬೋಗಿಗಳು ಇರಲಿವೆ.

ಈ ರೈಲಿನ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

RELATED ARTICLES
Most Popular

Recent Comments

- Advertisment -
Google search engine
error: Content is protected !!