MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Weather

ಬೆಂಗಳೂರು : ಹವಾಮಾನ ಇಲಾಖೆಯು (Meteorological Department) ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ (Rain forecast) ನೀಡಿದೆ.

ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು‌ (ಮಾ.17) ಯೆಲ್ಲೋ ಅಲರ್ಟ್ (Yellow Alert) ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 17 ರ ದ್ವಾದಶ ರಾಶಿಗಳ ಫಲಾಫಲ.!

ನಾಳೆ (ಮೇ 18) ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಹಾವೇರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange alert for districts of North Karnataka) ಘೋಷಿಸಲಾಗಿದೆ.

ಅಲ್ಲದೇ ಹಾಸನ, ತುಮಕೂರು, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ತನಕ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನು ಓದಿ : Covid : ಏಷ್ಯಾ ಖಂಡದಲ್ಲಿ ಮತ್ತೆ ಒಕ್ಕರಿಸಿದ ಕೋವಿಡ್.!

ರಾಜ್ಯದಲ್ಲಿ ಮಾರ್ಚ್‌ನಿಂದ ಈವರೆಗೆ ಸಾಮಾನ್ಯವಾಗಿ ವಾಡಿಕೆ ಪ್ರಕಾರ 69 ಮಿ.ಮೀ ಮಳೆಯಾಗಬೇಕು (69 mm of rain as usual). ಆದರೆ, ಈ ಬಾರಿ 108 ಮಿ.ಮೀ ಮಳೆಯಾಗಿದೆ. ಒಟ್ಟಾರೆ ಶೇ. 56ರಷ್ಟು ಹೆಚ್ಚಿನ ಮಳೆಯಾಗಿದೆ.

ದಕ್ಷಿಣ ಒಳನಾಡಿನಲ್ಲಿ 128 ಮಿ. ಮೀ ಮಳೆಯಾಗಿದ್ದು, ಶೇ. 44 ರಷ್ಟು ಹೆಚ್ಚಿನ ಮಳೆಯಾಗಿದೆ. ಕರಾವಳಿಯಲ್ಲಿ 89.8 ಮಿ. ಮೀ. ಮಳೆಯಾಗುವ ಮೂಲಕ ಶೇ. 34ರಷ್ಟು ಹೆಚ್ಚಿನ ಮಳೆಯಾಗಿದೆ. ಇನ್ನೂ ಉತ್ತರ ಒಳನಾಡಿನಲ್ಲಿ 89.3 ಮಿ. ಮೀ ಮಳೆಯಾಗಿದ್ದು, ಶೇ.89ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

Leave a Comment

Your email address will not be published. Required fields are marked *

Scroll to Top