ಬೆಂಗಳೂರು : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ (suffocating) ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಭೀಕರ ದುರಂತ ಬೆಂಗಳೂರಿನ ಕೊಡಿಗೇಹಳ್ಳಿ (Kodigehalli) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತನ್ನ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ (suicide) ಶರಣಾದ ತಾಯಿಯನ್ನು ಕುಸುಮಾ (35) ಎಂದು ತಿಳಿದು ಬಂದಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
ಇದನ್ನು ಓದಿ : Astrology : ಡಿಸೆಂಬರ್ 12ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಕೌಟುಂಬಿಕ ಕಲಹದಿಂದ ಬೇಸತ್ತು ಕುಸುಮಾ ಡೆತ್‌ನೋಟ್ (death note) ಬರೆದಿಟ್ಟು ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತಾಯಿ ಕುಸುಮಾ ತನ್ನ 6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಹತ್ಯೆಗೈದ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಪತಿಯೊಂದಿಗೆ ಜಗಳವಾಡಿದ್ದ ಕುಸುಮಾ, ಮನನೊಂದು ನಮ್ಮ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್ (death note) ನಲ್ಲಿ ಬರೆದು ನೇಣು ಬಿಗಿದುಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : Astrology : ಡಿಸೆಂಬರ್ 11ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಘಟನಾ ಸ್ಥಳಕ್ಕೆ ಕೊಡಿಗೇಹಳ್ಳಿ ಠಾಣೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Recent Comments