ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕಿನ ದಾಸರಹಳ್ಳಿ (Dasarahalli of Chikkamagaluru Taluk) ಸಮೀಪ ಪ್ರಿಯತಮೆಯನ್ನು ಕೊಂದು ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಮಧು ಹಾಗೂ ಆತನ ಪ್ರಿಯತಮೆ ಪೂರ್ಣಿಮಾ ಸಾವಿಗೀಡಾಗಿದ್ದು, ಇವರು ರಾಮನಗರ ಮೂಲದವರು ಎಂದು ತಿಳಿದು ಬಂದಿದೆ.
ಇದನ್ನು ಓದಿ : ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ : ಕಾನೂನು ಕಾಲೇಜು ಉಪಪ್ರಾಂಶುಪಾಲರು ಸೇರಿ ಮೂವರ ಬಂಧನ̤!
ಕಾರಿನಲ್ಲಿ ಯುವತಿಯ ಶವ ಕಂಡುಬಂದರೆ, ಸ್ವಲ್ಪ ದೂರದ ಮರದಲ್ಲಿ ಯುವಕನ ಶವ ನೇತಾಡುತ್ತಿರುವುದು (Hanging) ಪತ್ತೆಯಾಗಿದೆ. ಇನ್ನೂ ಸಾವಿನ ಸುತ್ತ ಸಾಕಷ್ಟು ಅನುಮಾನಗಳು (A lot of suspicion surrounds the death) ಮೂಡಿದೆ.
ಕಳೆದ ಎರಡು ವರ್ಷಗಳಿಂದ ಮಧು ಹಾಗೂ ಪೂರ್ಣಿಮಾ ಪರಸ್ಪರ ಪ್ರೀತಿ ಮಾಡುತ್ತಿದ್ದರು (They loved each other). ಬುಧವಾರ ಇವರಿಬ್ಬರೂ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದು (come on a trip to Chikmagalur), ಈ ವೇಳೆ ಯುವತಿಯನ್ನು ಕೊಲೆ ಮಾಡಿ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ : ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ : ಕಾನೂನು ಕಾಲೇಜು ಉಪಪ್ರಾಂಶುಪಾಲರು ಸೇರಿ ಮೂವರ ಬಂಧನ̤!
ಯುವತಿಯ ಕತ್ತು ಹಿಸುಕಿರುವ ಗುರುತು ಪತ್ತೆಯಾಗಿದ್ದು, ವೇಲ್ ನಿಂದ ಪಕ್ಕದ ಮರದಲ್ಲಿ ಯುವಕ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Recent Comments