Google search engine
Home Blog Page 14

ಮಾರಣಾಂತಿಕ ಆಲರ್ಜಿ ಪರಿಣಾಮ ; ನಿಷೇಧ ಆಗುತ್ತಾ Lays.?

ಬೆಂಗಳೂರು : ಫ್ರಿಟೊ -ಲೇ ಅವರ ‘ಕ್ಲಾಸಿಕ್ ಪೊಟಾಟೊ ಚಿಪ್ಸ್’ ಮಾರಾಟವನ್ನು, ಯುನೈಟೆಡ್ ಸ್ಟೇಟ್ಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (FDA), ಹಿಂಪಡೆಯಲು ಆದೇಶಿಸಿದೆ.

ಮಾರಣಾಂತಿಕ ಅಲರ್ಜಿ ಅಂಶಗಳು ಇದರಲ್ಲಿ ಕಂಡುಬಂದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದೆ.

Read It : ಓವರ್‌ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲಿಯೇ ಮೂವರು *ವು.!

ಪ್ಯಾಕಿಂಗ್‌ನಲ್ಲಿ ಎಚ್ಚರಿಕೆಯನ್ನು ಬರೆಯಲಾಗಿಲ್ಲ. ಹೀಗಾಗಿ ಈ ನಿರ್ಧಾರವನ್ನು FDA ಪ್ರಕಟಿಸಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಅಲರ್ಜಿ ಇರುವವರು ಈ ಉತ್ಪನ್ನವನ್ನು ಸೇವಿಸುವ ಮೂಲಕ ಗಂಭೀರ ಮತ್ತು ಮಾರಣಾಂತಿಕ ಅಲರ್ಜಿಯ ಸಮಸ್ಯೆ ಎದುರಿಸಬಹುದು ಎಂಬುದು FDA ಕಳಕಳಿಯಾಗಿದೆ.

Read it : ವಿಡಿಯೋ : ಪುಷ್ಪಾ – 2 ಕಾಲ್ತುಳಿತ ಪ್ರಕರಣ ; ನಟ ಅಲ್ಲು ಅರ್ಜುನ ಮನೆ ಮೇಲೆ ಕಲ್ಲು ತೂರಾಟ.!

ವಾಷಿಂಗ್ಟನ್‌ ಮತ್ತು ಒರೆಗಾನ್ ನಲ್ಲಿ ಮಾರಾಟವಾದ 13-ಔನ್ಸ್ ಲೇ’ಸ್ ಕ್ಲಾಸಿಕ್ ಪೊಟಾಟೊ ಚಿಪ್ಸ್ ಅನ್ನು ಮರುಪಡೆಯುವುದಾಗಿ ಫ್ರಿಟೊ- ಲೇ ಘೋಷಿಸಿದ್ದಾರೆ.

ದೊಡ್ಡ ಪ್ರಮಾಣದ ಉತ್ಪಾದನೆಯಲ್ಲಿ ಸ್ಥಿರವಾದ ಸುರಕ್ಷತಾ ಮಾನದಂಡಗಳನ್ನು ನಿರ್ವಹಿಸುವುದು ಎಷ್ಟು ಸವಾಲಾಗಿದೆ ಎಂಬುದನ್ನು ಈ ಘಟನೆಯು ಎತ್ತಿ ತೋರಿಸುತ್ತದೆ

ವಿಡಿಯೋ : ಪುಷ್ಪಾ – 2 ಕಾಲ್ತುಳಿತ ಪ್ರಕರಣ ; ನಟ ಅಲ್ಲು ಅರ್ಜುನ ಮನೆ ಮೇಲೆ ಕಲ್ಲು ತೂರಾಟ.!

ಡೆಸ್ಕ್ : ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Icon Star Allu Arjun) ಸುತ್ತ ವಿವಾದಗಳು ಉಲ್ಬಣಗೊಳ್ಳುತ್ತಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಈಗಾಗಲೇ ನಟನ ವಿರುದ್ಧವಾಗಿವೆ.

ಇದೀಗ ಜುಬಿಲಿ ಹಿಲ್ಸ್‌ನಲ್ಲಿರುವ ಅಲ್ಲು ಅರ್ಜುನ್ ನಿವಾಸದ ಮೇಲೆ ಒಯು ಜೆಎಸಿ ನಾಯಕರು ಎಂದು ಹೇಳಿಕೊಳ್ಳುವ ಕೆಲ ಅಪರಿಚಿತ ವ್ಯಕ್ತಿಗಳು ನಟನ ಮನೆಯ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ನಟ ಅಲ್ಲು ಅರ್ಜುನ್ ಮನೆಗೆ ಕಲ್ಲು ತೂರಾಟ (Stone throwing) ನಡೆಸಿದ್ದಾರೆ ಎಂದು ವರದಿಯಾಗಿದೆ.

Read it : ಓವರ್‌ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲಿಯೇ ಮೂವರು *ವು.!

ವೈರಲ್ ಆಗಿರೋ ವಿಡಿಯೋದಲ್ಲಿ ಕಾಣಿಸಿಕೊಂಡಂತೆ ಕಲ್ಲು ತೂರಾಟದಲ್ಲಿ ತೊಡಗಿರುವ ವ್ಯಕ್ತಿಗಳು ಮೃತ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ (They are demanding justice for the deceased family).

ಕಾಲ್ತುಳಿತದಲ್ಲಿ ರೇವತಿ ಸಾವಿಗೆ ನಟ ಅಲ್ಲು ಅರ್ಜುನ್ ಕಾರಣ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು (Protesters) ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Read it : Astrology : ಡಿಸೆಂಬರ್ 22ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಮೃತ ರೇವತಿ ಕುಟುಂಬಕ್ಕೆ ಅಲ್ಲು ಅರ್ಜುನ್ 1 ಕೋ. ರೂಪಾಯಿ ಪರಿಹಾರ (1 crore Rupee compensation) ನೀಡಿ ಅವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆಗೆ ಅಲ್ಲು ಅರ್ಜುನ್ ಪ್ರತಿಕ್ರಿಯೆ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.

ಓವರ್‌ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲಿಯೇ ಮೂವರು *ವು.!

ಮಂಡ್ಯ : ಮಂಡ್ಯದಲ್ಲೊಂದು ಕಾರು ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Astrology : ಡಿಸೆಂಬರ್ 21ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ರಾಷ್ಟ್ರೀಯ ಹೆದ್ದಾರಿ 209ರಲ್ಲಿ KSRTC ಬಸ್ ಓವರ್‌ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಈ ದುರ್ಘಟನೆಯಲ್ಲಿ ಪ್ರಣವ್, ಆಕಾಶ್ ಮತ್ತು ಆದರ್ಶ್ ಎಂಬ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇನ್ನೋರ್ವ ವಿದ್ಯಾರ್ಥಿಯಾದ ಪೃಥ್ವಿ ಎಂಬುವವನಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಪೃಥ್ವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ : Astrology : ಡಿಸೆಂಬರ್ 22ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಮೂಲಗಳ ಪ್ರಕಾರ, ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡಿಗೆ ಪ್ರವಾಸಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ.

ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Astrology : ಡಿಸೆಂಬರ್ 22ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 22ರ ಭಾನುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಸ್ಥಿರಾಸ್ತಿ ಮಾರಾಟದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಅದಯಕ್ಕೆ ಮೀರಿದ ಖರ್ಚುಗಳಿರುತ್ತವೆ. ಸಂಬಂಧಿಕರಿಂದ ಸಾಲದ ಒತ್ತಡವನ್ನು ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರದಲ್ಲಿ ಸಣ್ಣ ಸಮಸ್ಯೆಗಳು ಎದುರಾಗುತ್ತವೆ. ಉದ್ಯೋಗದಲ್ಲಿ ಹಠಾತ್ ಸ್ಥಾನ ಚಲನೆ ಸೂಚನೆಗಳಿವೆ.

*ವೃಷಭ ರಾಶಿ*
ಆಪ್ತ ಮಿತ್ರರಿಂದ ಮಹತ್ವದ ಮಾಹಿತಿ ಸಿಗುತ್ತದೆ. ಕೈಗೊಂಡ ಕಾರ್ಯಕ್ರಮಗಳು ಸುಗಮವಾಗಿ ಸಾಗುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣ ಇರುತ್ತದೆ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ ಮತ್ತು ಉದ್ಯೋಗಗಳಲ್ಲಿನ ಸಮಸ್ಯೆಗಳು ದೂರವಾಗುತ್ತವೆ.

ಇದನ್ನು ಓದಿ : Astrology : ಡಿಸೆಂಬರ್ 21ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಮಿಥುನ ರಾಶಿ*
ಸಹೋದರರೊಂದಿಗಿನ ಆಸ್ತಿ ವಿವಾದಗಳಿಂದ ಕಿರಿಕಿರಿ ಉಂಟಾಗುತ್ತದೆ. ಕುಟುಂಬ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಸಾಲದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ. ಹಠಾತ್ ಪ್ರಯಾಣ ಸೂಚನೆಗಳಿವೆ. ವ್ಯಾಪಾರ ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

*ಕಟಕ ರಾಶಿ*
ಭೂಮಿ ಮಾರಾಟ ಲಾಭದಾಯಕವಾಗಿರುತ್ತದೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ನಿಮ್ಮ ಆಲೋಚನೆಗಳು ಎಲ್ಲರಿಗೂ ಇಷ್ಟವಾಗುತ್ತವೆ ಮತ್ತು ವೃತ್ತಿಪರ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ. ಹಳೆಯ ಘಟನೆಗಳು ನೆನಪಿಗೆ ಬರುತ್ತವೆ. ಉದ್ಯೋಗ ಪ್ರಯತ್ನಗಳು ಆಶಾದಾಯಕವಾಗಿರುತ್ತವೆ.

*ಸಿಂಹ ರಾಶಿ*
ನಿರುದ್ಯೋಗಿಗಳ ನಿರೀಕ್ಷೆಗಳು ಈಡೇರುತ್ತವೆ. ಹೊಸ ಉತ್ಸಾಹದಿಂದ ಕೆಲವು ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ನಿರ್ಣಾಯಕ ಸಮಯದಲ್ಲಿ ಆತ್ಮೀಯರ ಸಲಹೆಯು ಕೂಡಿ ಬರುತ್ತದೆ. ದೈವಿಕ ಸೇವೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಹೆಚ್ಚು ಲಾಭದಾಯಕವಾಗುತ್ತವೆ, ಉದ್ಯೋಗದಲ್ಲಿ ಬಡ್ತಿಗಳು ಹೆಚ್ಚಾಗುತ್ತವೆ.

*ಕನ್ಯಾ ರಾಶಿ*
ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವೆಚ್ಚ ಮತ್ತು ಶ್ರಮ ಅಧಿಕವಾಗುತ್ತದೆ. ಸಂಬಂಧಿಕರೊಂದಿಗೆ ವಿನಾಕಾರಣ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಹಣಕಾಸಿನ ತೊಂದರೆಯಿಂದಾಗಿ, ಹೊಸ ಸಾಲಗಳನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ಪ್ರಯಾಣವನ್ನು ಮುಂದೂಡಲಾಗುತ್ತದೆ. ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ.

ಇದನ್ನು ಓದಿ : Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ತುಲಾ ರಾಶಿ*
ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಹಿವಾಟುಗಳು ಸ್ವಲ್ಪಮಟ್ಟಿಗೆ ನಿರುತ್ಸಾಹಗೊಳಿಸುತ್ತವೆ. ದೂರ ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.

*ವೃಶ್ಚಿಕ ರಾಶಿ*
ಬಂಧು ಮಿತ್ರರೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ದೀರ್ಘಾವಧಿ ಸಾಲಗಳು ನಿವಾರಣೆಯಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ*
ಕೈಗೆತ್ತಿಕೊಂಡ ವ್ಯವಹಾರಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಸಂಬಂಧಿಕರಿಂದ ಮಹತ್ವದ ಮಾಹಿತಿ ದೊರೆಯುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವ್ಯಾಪಾರ ವಿಸ್ತರಣೆಗೆ ಇದ್ದ ಅಡೆತಡೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ಅನುಕೂಲಕರ ವಾತಾವರಣವಿರುತ್ತದೆ.

*ಮಕರ ರಾಶಿ*
ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳು ಎದುರಾಗುತ್ತವೆ. ಹೊಸ ಸಾಲಗಳನ್ನು ಮಾಡಲಾಗುತ್ತದೆ. ಸಂಬಂಧಿಕರೊಂದಿಗೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತವೆ. ಪ್ರಯಾಣದಲ್ಲಿ ಅನಿರೀಕ್ಷಿತ ಬದಲಾವಣೆಗಳಿರುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳಿರುತ್ತವೆ.

ಇದನ್ನು ಓದಿ : Astrology : ಡಿಸೆಂಬರ್ 19ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಕುಂಭ ರಾಶಿ*
ಆರ್ಥಿಕ ಸ್ಥಿತಿ ನಿರಾಶಾದಾಯಕವಾಗಿರುತ್ತದೆ, ಹೊಸ ಸಾಲಗಳನ್ನು ತೆಗೆದುಕೊಳ್ಳುತ್ತೀರಿ. ದೂರದ ಸಂಬಂಧಿಕರಿಂದ ಮಹತ್ವದ ಮಾಹಿತಿ ದೊರೆಯುತ್ತದೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ವ್ಯಾಪಾರದಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಉದ್ಯೋಗಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ.

*ಮೀನ ರಾಶಿ*
ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ, ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ವ್ಯವಹಾರಗಳು ಯಶಸ್ವಿಯಾಗುತ್ತವೆ. ಆತ್ಮೀಯರಿಂದ ಅನಿರೀಕ್ಷಿತ ಆಹ್ವಾನಗಳು ದೊರೆಯುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವ್ಯಾಪಾರಗಳು ಮತ್ತಷ್ಟು ವಿಸ್ತಾರಗೊಳ್ಳುತ್ತವೆ. ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಉಂಟಾಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Astrology : ಡಿಸೆಂಬರ್ 21ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 21ರ ಶನಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ವ್ಯಾಪಾರ ವ್ಯವಹಾರಗಳಲ್ಲಿ ಕುಟುಂಬದ ಮುಖ್ಯಸ್ಥರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಆರ್ಥಿಕ ಪರಿಸ್ಥಿತಿ ನಿಧಾನವಾಗುತ್ತದೆ. ಮನೆಯ ಹೊರಗೆ ಮಾನಸಿಕ ಸಮಸ್ಯೆಗಳು ಕಿರಿಕಿರಿಯುಂಟುಮಾಡುತ್ತವೆ. ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ.

*ವೃಷಭ ರಾಶಿ*
ಸಕಾಲದಲ್ಲಿ ಕೆಲಸಗಳು ಪೂರ್ಣಗೊಳ್ಳುತ್ತವೆ. ದೂರದ ಬಂಧುಗಳಿಂದ ಶುಭ ಸುದ್ದಿ ಸಿಗುತ್ತದೆ. ಹಠಾತ್ ಧನಲಾಭ ದೊರೆಯುತ್ತದೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯಾಪಾರ ವಿಸ್ತರಣೆಗಾಗಿ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ ಮತ್ತು ಹಳೆ ಸಾಲಗಳನ್ನು ತೀರಿಸುತ್ತೀರಿ.

ಇದನ್ನು ಓದಿ : ಕೋರ್ಟ್‌ನಲ್ಲೇ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡ ಆರೋಪಿ.!

*ಮಿಥುನ ರಾಶಿ*
ಮನೆಯ ಹೊರಗೆ ಹೊಸ ಸಮಸ್ಯೆಗಳಿರುತ್ತವೆ. ಮಾನಸಿಕ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ನಿರೀಕ್ಷಿತ ಕೆಲಸಗಳು ಮುಂದೆ ಸಾಗದೆ ನಿರಾಶೆ ಹೆಚ್ಚಾಗುತ್ತದೆ. ಮಿತ್ರರೊಂದಿಗೆ ಸಣ್ಣಪುಟ್ಟ ಜಗಳಗಳು ಉಂಟಾಗುತ್ತದೆ. ವೃತ್ತಿಪರ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ ಮತ್ತು ಉದ್ಯೋಗಗಳಲ್ಲಿ ಶ್ರಮಕ್ಕೆ ತಕ್ಕ ಮನ್ನಣೆ ಸಿಗುವುದಿಲ್ಲ.

*ಕಟಕ ರಾಶಿ*
ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ. ಆಪ್ತ ಮಿತ್ರರಿಂದ ಆಶ್ಚರ್ಯಕರ ಸಂಗತಿಗಳು ತಿಳಿಡು ಬರುತ್ತವೆ, ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಫಲಿಸುತ್ತವೆ. ವೃತ್ತಿ ವ್ಯಾಪಾರಗಳಲ್ಲಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ಅವಕಾಶಗಳು ದೊರೆಯುತ್ತವೆ.

*ಸಿಂಹ ರಾಶಿ*
ಬಂಧು ಮಿತ್ರರ ನೆರವಿನಿಂದ ಕೆಲವು ವ್ಯವಹಾರಗಳು ಪೂರ್ಣಗೊಳ್ಳುತ್ತವೆ. ಬಾಲ್ಯದ ಗೆಳೆಯರ ಮಿಲನ ಸಂತಸ ತರುತ್ತದೆ. ಕುಟುಂಬ ಸದಸ್ಯರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದ ಮುಕ್ತಿ ದೊರೆಯುತ್ತದೆ. ಆರ್ಥಿಕ ವಾತಾವರಣವು ನಿರೀಕ್ಷೆಯಂತೆ ಇರುತ್ತದೆ.

*ಕನ್ಯಾ ರಾಶಿ*
ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಎದುರಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ವ್ಯಾಪಾರಗಳು ನಿಧಾನವಾಗಿರುತ್ತವೆ. ಉದ್ಯೋಗ ವಾತಾವರಣವು ಗೊಂದಲಮಯವಾಗಿರುತ್ತವೆ.

ಇದನ್ನು ಓದಿ : Video : ಗ್ಯಾಸ್ ಟ್ಯಾಂಕರ್ ಸ್ಪೋಟ; ಐವರ ಸಾವು.!

*ತುಲಾ ರಾಶಿ*
ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಪ್ರಮುಖ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆಯಿರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ವಿವಾದಗಳು ಉಂಟಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಪ್ರಯತ್ನಗಳು ಫಲ ನೀಡುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ.

*ವೃಶ್ಚಿಕ ರಾಶಿ*
ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ ಮತ್ತು ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡುತ್ತೀರಿ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳು ಲಾಭದಾಯಕವಾಗುತ್ತವೆ.

*ಧನುಸ್ಸು ರಾಶಿ*
ಮನೆ ನಿರ್ಮಾಣ ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಮನೆಯ ಹೊರಗೆ ಮನಸ್ಸಿನ ಶಾಂತಿ ಇರುತ್ತದೆ ಮತ್ತು ಕೈಗೊಂಡ ವ್ಯವಹಾರಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಧಿಕಾರಿಗಳ ಕೃಪೆಯಿಂದ ಉದ್ಯೋಗಾವಕಾಶಗಳು ದೊರೆಯುತ್ತವೆ.

*ಮಕರ ರಾಶಿ*
ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತೀರಿ. ದೂರ ಪ್ರಯಾಣದಲ್ಲಿ ಜಾಗರೂಕರಾಗಿರಿ. ವ್ಯಾಪಾರ ಉದ್ಯೋಗಗಳು ಸ್ವಲ್ಪ ನಿಧಾನವಾಗುತ್ತವೆ. ನಿಗದಿತ ಸಮಯಕ್ಕೆ ಹಣ ಕೈ ಸೇರದೆ ತೊಂದರೆ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

ಇದನ್ನು ಓದಿ : Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಕುಂಭ ರಾಶಿ*
ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಖರ್ಚು ವೆಚ್ಚಗಳ ಬಗ್ಗೆ ಯೋಚಿಸಿ ವ್ಯವಹರಿಸುವುದು ಉತ್ತಮ. ಆಕಸ್ಮಿಕ ಪ್ರಯಾಣಗಳನ್ನು ಮಾಡಲಾಗುತ್ತದೆ. ಸ್ನೇಹಿತರೊಂದಿಗೆ ಸಣ್ಣಪುಟ್ಟ ವಾದ ವಿವಾದಗಳು ಉಂಟಾಗುತ್ತದೆ ಮತ್ತು ವ್ಯವಹಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಕೂಡಿ ಬರುವುದಿಲ್ಲ. ವೃತ್ತಿಪರ ಕೆಲಸಗಳು ನಿಧಾನವಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಮೀನ ರಾಶಿ*
ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳನ್ನು ಸ್ವೀಕರಿಸುತ್ತೀರಿ. ಕೆಲಸಗಳು ತ್ವರಿತವಾಗಿ ಪೂರ್ಣಗೊಳ್ಳುತ್ತವೆ. ಹಳೆಯ ಸ್ನೇಹಿತರೊಂದಿಗೆ ಭೋಜನ ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಕೋರ್ಟ್‌ನಲ್ಲೇ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡ ಆರೋಪಿ.!

ವಿಜಯಪುರ : ವ್ಯಕ್ತಿಯೋರ್ವ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡಿರುವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ಈ ರೀತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಾಜು ಹೊಸಮನಿ ಎಂದು ಗುರುತಿಸಲಾಗಿದ್ದು, ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನು ಓದಿ : Video : ಗ್ಯಾಸ್ ಟ್ಯಾಂಕರ್ ಸ್ಪೋಟ; ಐವರ ಸಾವು.!

ಈ ರಾಜು ಹೊಸಮನಿ ಕೆಲವು ಹಳೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಕಾರಣ ಆತನ ವಿರುದ್ಧ ನ್ಯಾಯಾಲಯದ ವಾರೆಂಟ್ ಇತ್ತು. ಕಳೆದ ಡಿಸೆಂಬರ್ 20 ರಂದು ಶುಕ್ರವಾರ ಕೆಇಬಿ ಬಳಿ ಇವನನ್ನು ಪೊಲೀಸರು ಬಂಧಿಸಿದ್ದರು.

ಬಂಧಿಸಿದ ಬಳಿಕ ಪೊಲೀಸರು ನೇರವಾಗಿ ರಾಜು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಕರೆತಂದರು. ಇದೇ ವೇಳೆ ಆರೋಪಿ ಬ್ಲೇಡ್‌ನಿಂದ ಕತ್ತು ಕೊಯ್ದಿದ್ದಾನೆ.

ಇದನ್ನು ಓದಿ : Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಆದರೆ, ಹರಿತವಾದ ಬ್ಲೇಡ್ ಆರೋಪಿಯೊಬ್ಬನ ಕೈಗೆ ಹೇಗೆ ಬಂತು ಎಂಬುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Video : ಗ್ಯಾಸ್ ಟ್ಯಾಂಕರ್ ಸ್ಪೋಟ; ಐವರ ಸಾವು.!

0

ಡೆಸ್ಕ್ : ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ (LPG and CNG truck) ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವ ದಹನವಾದ ಘಟನೆ ರಾಜಸ್ಥಾನದ ಜೈಪುರದಲ್ಲಿ (Jaipur in Rajasthan) ನಡೆದಿದೆ ಎಂದು ವರದಿಯಾಗಿದೆ.

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬಂದಿ ಹರಸಾಹಸ ಪಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ (The death toll is likely to rise) ಇದೆ ಎಂದು ವರದಿ ತಿಳಿಸಿದೆ.

Read it : Boyfreindಗಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವತಿಯರು ; ವಿಡಿಯೋ ವೈರಲ್.!

ಈ ಅಪಘಾತದಲ್ಲಿ 12 ರಿಂದ 15 ಜನರು ಗಂಭೀರವಾಗಿ ಗಾಯಗೊಂಡಿದ್ದು (serious injuries), ಅವರನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಅಪಘಾತದ ಕೆಲವು ವಿಡಿಯೋಗಳು ಹೊರಬಿದ್ದಿದ್ದು, ಅದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದು ಸೆರೆಯಾಗಿದೆ.

Read it : Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಸುಟ್ಟಗಾಯಗಳಿಂದ ಬಳಲುತ್ತಿರುವ ಕೆಲವರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಬೆಂಕಿಯು ಹಲವಾರು ಟ್ರಕ್‌ಗಳನ್ನು ಆವರಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಟ್ರಕ್‌ಗಳ ಸಂಖ್ಯೆ ಸ್ಪಷ್ಟವಾಗಿಲ್ಲ.

ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ (Truck lost driver’s control) ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಎನ್‌ಜಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಪೆಟ್ರೋಲ್ ಬಳಿ ನಿಲ್ಲಿಸಿದ್ದ ಇತರ ವಾಹನಗಳಿಗೂ ಬೆಂಕಿ ಹೊತ್ತಿಕೊಂಡು ಆಹುತಿಯಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 20ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಆರೋಗ್ಯದಲ್ಲಿ ಸಮಸ್ಯೆಗಳಿರುತ್ತವೆ. ವಾಹನಗಳಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ಅಗತ್ಯ, ಉದ್ಯೋಗಿಗಳಿಗೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಪಾಲುದಾರಿಕೆ ವ್ಯವಹಾರಗಳ ನಡುವೆ ಸ್ವಲ್ಪ ವಿವಾದಗಳಿರುತ್ತವೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ನಿರಾಶಾದಾಯಕವಾಗಿರುತ್ತದೆ.

*ವೃಷಭ ರಾಶಿ*
ಎಲ್ಲಾ ಕ್ಷೇತ್ರಗಳಿಗೂ ಅನುಕೂಲಕರ ಫಲಿತಾಂಶ ದೊರೆಯುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಬಾಲ್ಯದ ಸ್ನೇಹಿತರಿಂದ ಪ್ರಮುಖ ಮಾಹಿತಿ ಬರುತ್ತದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಉದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ.

Read it : Boyfreindಗಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವತಿಯರು ; ವಿಡಿಯೋ ವೈರಲ್.!

*ಮಿಥುನ ರಾಶಿ*
ಮನೆಯ ಹಿರಿಯರ ಆರೋಗ್ಯ ಚಿಂತಾಜನಕವಾಗಿರುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಹಣದ ವಿಚಾರದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಎಷ್ಟೇ ಕಷ್ಟಪಟ್ಟರೂ ಫಲ ಸಿಗದೇ ನಿರಾಸೆ ಉಂಟಾಗುತ್ತದೆ. ಬಂಧುಗಳೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ.

*ಕಟಕ ರಾಶಿ*
ವ್ಯಾಪಾರ ಮತ್ತು ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ಆಸ್ತಿ ವಿವಾದಗಳು ಒಂದು ಹಂತಕ್ಕೆ ಬರುತ್ತವೆ. ಹಣಕಾಸಿನ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಆರಂಭಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಹಳೆ ಸಾಲಗಳನ್ನು ತೀರಿಸುತ್ತೀರಿ.

*ಸಿಂಹ ರಾಶಿ*
ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಬೆಲೆಬಾಳುವ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ.

*ಕನ್ಯಾ ರಾಶಿ*
ವ್ಯರ್ಥ ಖರ್ಚಿನ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ರಾಜಕೀಯ ಸಭೆ ಸಮಾರಂಭಗಳಿಗೆ ಆಹ್ವಾನಗಳು ದೊರೆಯುತ್ತವೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗಿನ ಚರ್ಚೆಗಳು ಹೆಚ್ಚು ಅನುಕೂಲಕರವಾಗಿರುದಿಲ್ಲ. ನಿರುದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ.

Read it : Boyfreindಗಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವತಿಯರು ; ವಿಡಿಯೋ ವೈರಲ್.!

*ತುಲಾ ರಾಶಿ*
ಪರರ ವಿಚಾರಗಳಿಂದ ದೂರವಿರುವುದು ಉತ್ತಮ. ವಾಹನ ಪ್ರಯಾಣವನ್ನು ಮುಂದೂಡಲಾಗುತ್ತದೆ, ವ್ಯಾಪಾರ ಪಾಲುದಾರರೊಂದಿಗೆ ಎಚ್ಚರಿಕೆಯಿಂದ ಮಾತನಾಡುವುದು ಉತ್ತಮ. ದೂರದ ಸಂಬಂಧಿಕರು ಮತ್ತು ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ.

*ವೃಶ್ಚಿಕ ರಾಶಿ*
ಸೋದರ ಸಂಬಂಧಿಗಳೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಕೈಗೆತ್ತಿಕೊಂಡ ಕೆಲಸಗಳು ವಿಳಂಬವಿಲ್ಲದೆ ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ಸೋದರ ಸಂಬಂಧಿಗಳ ವರ್ತನೆಯು ಸ್ವಲ್ಪ ಕಿರಿಕಿರಿಯುಂಟುಮಾಡುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಉದ್ಯೋಗದಲ್ಲಿ ಸ್ವಲ್ಪ ಅನುಕೂಲತೆ ಉಂಟಾಗುತ್ತದೆ. ವ್ಯಾಪಾರ-ವ್ಯವಹಾರಗಳು ಅಲ್ಪ ಲಾಭವನ್ನು ಪಡೆಯುತ್ತವೆ.

*ಧನುಸ್ಸು ರಾಶಿ*
ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿರುದ್ಯೋಗಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವೃತ್ತಿಪರ ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಪ್ರಯಾಣದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ, ಹಳೆಯ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ.

*ಮಕರ ರಾಶಿ*
ನಿರುದ್ಯೋಗಿಗಳಿಗೆ ಮಹತ್ವದ ಮಾಹಿತಿ ಸಿಗುತ್ತದೆ. ಎಲ್ಲಾ ಕ್ಷೇತ್ರಗಳಿಗೂ ಅನುಕೂಲಕರ ವಾತಾವರಣವಿರುತ್ತದೆ, ಸ್ಥಿರ ಆಸ್ತಿಗಳ ಮಾರಾಟವನ್ನು ಮುಂದೂಡಲಾಗುತ್ತದೆ. ಹೊಸ ವಾಹನವನ್ನು ಖರೀದಿಸುತ್ತೀರಿ ಮತ್ತು ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ . ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಜವಾಬ್ದಾರಿಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ.

Read it : ಇಲಿಯ ಕಾರಣದಿಂದಾಗಿ ಪಾರ್ಶ್ವವಾಯುವಿಗೆ ತುತ್ತಾದ ಬಾಲಕಿ ; ಅದ್ಹೇಗೆ ಗೊತ್ತಾ.?

*ಕುಂಭ ರಾಶಿ*
ಶತ್ರುಗಳೂ ಸ್ನೇಹಿತರಾಗಿ ಸಹಾಯ ಮಾಡುತ್ತಾರೆ. ಬುದ್ಧಿವಂತಿಕೆಯಿಂದ ಆರ್ಥಿಕ ತೊಂದರೆಗಳಿಂದ ಹೊರಬರುತ್ತೀರಿ. ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪ್ರಮುಖ ವ್ಯಕ್ತಿಗಳೊಂದಿಗಿನ ಪರಿಚಯ ಲಾಭದಾಯಕವಾಗಿರುತ್ತದೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಸುಗಮವಾಗಿ ಸಾಗುತ್ತವೆ.

*ಮೀನ ರಾಶಿ*
ಹೊಸ ಕಾರ್ಯಕ್ರಮಗಳನ್ನು ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಸಹೋದರರಿಂದ ಪ್ರಮುಖ ಮಾಹಿತಿ ಸಿಗುತ್ತದೆ. ಬರಬೇಕಾದ ಹಣ ಸಮಯಕ್ಕೆ ಕೈ ಸೇರುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿವಾರಿಸಲಾಗುತ್ತದೆ. ಸಮಾಜದ ಪ್ರಮುಖರ ಪರಿಚಯಗಳು ಉತ್ಸಾಹದಾಯಕವಾಗಿರುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Boyfreindಗಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವತಿಯರು ; ವಿಡಿಯೋ ವೈರಲ್.!

ಡೆಸ್ಕ್‌ : ಇಬ್ಬರು ಜೀನ್ಸ್‌ ಪ್ಯಾಂಟ್‌ (wearing jeans) ಧರಿಸಿರುವ ಹುಡುಗಿಯರು ರಸ್ತೆಯ ಮಧ್ಯದಲ್ಲಿ ಬಾಯ್‌ಫ್ರೆಂಡ್‌ ವಿಷಯವಾಗಿ ಜಡೆ ಹಿಡಿದು ಹೊಡೆದಾಡುಕೊಳ್ಳುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವನು ನನ್ನ ಬಾಯ್‌ಫ್ರೆಂಡ್‌ ; ಅಲ್ಲಾ, ಅವ್ನು ನನ್ನ ಬಾಯ್‌ಫ್ರೆಂಡ್‌ (“He’s my boyfriend”) ಎಂದು ಆರಂಭವಾದ ಜಗಳ ರಸ್ತೆಯಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ತಣ್ಣನೆಯ ರಾತ್ರಿಯಲ್ಲಿ ಎಲ್ಲರೂ ಮನೆಯಲ್ಲಿ ಬೆಚ್ಚಗಿರಲು ಬಯಸಿದರೆ, ಹುಡುಗಿಯರು ಬೆವರು (sweat) ಸುರಿಸುವಂತೆ ಜಗಳವಾಡುತ್ತಿದ್ದಾರೆ. ಈ ಇಬ್ಬರು ಹುಡುಗಿಯರು ರಸ್ತೆಯ ಮಧ್ಯದಲ್ಲಿ ತನಗಾಗಿ ಜಗಳವಾಡುತ್ತಿದ್ದರೆ, ಇತ್ತ ದೂರದಲ್ಲಿ ನಿಂತಿದ್ದ ಗೆಳೆಯ ಮಾತ್ರ Cool ಆಗಿ ತನಗೇನು ಸಂಬಂಧವೇ ಇಲ್ಲ ಎಂಬಂತೆ ತಮಾಷೆ (nothing to do) ನೋಡುತ್ತಿದ್ದ.

Read this : ಇಲಿಯ ಕಾರಣದಿಂದಾಗಿ ಪಾರ್ಶ್ವವಾಯುವಿಗೆ ತುತ್ತಾದ ಬಾಲಕಿ ; ಅದ್ಹೇಗೆ ಗೊತ್ತಾ.?

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (viral on social media) ಆಗಿರುವ ಈ ವಿಡಿಯೋ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ (Dehradun, the capital of Uttarakhand) ನಲ್ಲಿ ನಡೆದಿದ್ದು, ಇಬ್ಬರು ಹುಡುಗಿಯರು ರಸ್ತೆಯ ಮಧ್ಯದಲ್ಲಿ ಜಗಳವಾಡುತ್ತಿರುವುದನ್ನು ನೀವು ವೀಡಿಯೊದಲ್ಲಿ ನೋಡಬಹುದಾಗಿದೆ.

ಮೊದಮೊದಲು ಬಾಯಿ ಮಾತಲ್ಲೇ ಪ್ರಾರಂಭವಾದ ಜಗಳ, ನಂತರ ಅವರು ಕೈಗಳನ್ನು ಮುಟ್ಟಿಕೊಂಡು ಜಗಳವಾಡುವವರೆಗೆ ಬಂದಿದೆ. ಆಮೇಲೆ ಇಬ್ಬರೂ ಕೆಟ್ಟ ಮಾತುಗಳಿಂದ ಜಗಳವಾಡುತ್ತಾ, ವಿಪರೀತವಾಗುತ್ತದೆ (escalated to a fight). ಇಬ್ಬರೂ ರಸ್ತೆಯಲ್ಲಿಯೇ ಹೊರಳಾಡಿ ಕೂದಲನ್ನು ಎಳೆದುಕೊಂಡು ಇಬ್ಬರೂ ರಕ್ತಸ್ರಾವವಾಗುವಷ್ಟು ಪರಸ್ಪರ ಹೊಡೆದಾಡಿಕೊಳ್ಳುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು.

Read this : Astrology : ಡಿಸೆಂಬರ್ 19ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಈ ಇಬ್ಬರು ಹುಡುಗಿಯರ ಜಗಳವನ್ನು ಪಕ್ಕದಲ್ಲಿಯೇ ನಿಂತ ಒಬ್ಬ ಸ್ನೇಹಿತ ವಿಡಿಯೋ ಮಾಡಿದ್ದಾನೆ. ವಿಡಿಯೋದಲ್ಲಿ “ನನ್ನನ್ನು ಫಕ್ ಮಾಡು, ಏಕೆ? (“Fuck me, why?)” ಎಂದು ಹೇಳುವುದನ್ನು ನೀವು ಕೇಳಬಹುದು. ಆದರೆ ರಸ್ತೆಯಲ್ಲಿ ಹಾದುಹೋಗುವವರು ಮಾತ್ರ ಸ್ವಲ್ಪ ಹೊತ್ತು ನಿಂತು ಏನಾಗುತ್ತಿದೆ ಎಂದು ನೋಡಲು ಸಿದ್ಧರಿದ್ದರೆ ವಿನಹ ಅವರ ಜಗಳ ಬಿಡಿಸಲು ಮುಂದಾಗಲಿಲ್ಲ.

ಸ್ವಲ್ಪ ಸಮಯದ ನಂತರ, ಅಲ್ಲಿಗೆ ಬಂದ ಮಹಿಳೆ ಇಬ್ಬರನ್ನು ಸಮಾಧಾನಪಡಿಸಿದಳು. ಜಗಳದ ನಂತರ, ಸಮಾಧಾನಗೊಂಡ ಹುಡುಗಿಯರು ಹೊರಟುಹೋದರು (left feeling relieved) ಎಂದು ಹೇಳಲಾಗುತ್ತಿದೆ. ಕೊನೆಗೆ ಗೆಳೆಯನನ್ನು ಯಾರು ಪಡೆದರು ಎಂಬ ಪ್ರಶ್ನೆಗೆ ಉತ್ತರ ಮಾತ್ರ ಸಿಕ್ಕಿಲ್ಲ.

ಇನ್ನು ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಕಾಮೆಂಟ್ (comment) ಮಾಡಲು ಪ್ರಾರಂಭಿಸಿದರು.

 

View this post on Instagram

 

A post shared by 4PM News Network (@4pmnews_network)

Astrology : ಡಿಸೆಂಬರ್ 19ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 19ರ ಗುರುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಕೆಲವು ವ್ಯವಹಾರಗಳಲ್ಲಿ ಅಲ್ಪಸ್ವಲ್ಪ ಗೊಂದಲಗಳು ಉಂಟಾಗುತ್ತವೆ. ಹಣಕಾಸಿನ ಸಮಸ್ಯೆಗಳಿಂದ ಹೊಸ ಸಾಲಗಳನ್ನು ಮಾಡಲಾಗುತ್ತದೆ. ದೈವಿಕ ಸೇವೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ದೈವಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸುತ್ತೀರಿ.

*ವೃಷಭ ರಾಶಿ*
ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಮನೆಯ ಹೊರಗೆ ಅನುಕೂಲಕರ ಪರಿಸ್ಥಿತಿಗಳಿರುತ್ತವೆ. ಸಮಾಜದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ ಮತ್ತು ಉದ್ಯೋಗಗಳಲ್ಲಿ ಬಡ್ತಿಗಳು ಹೆಚ್ಚಾಗುತ್ತವೆ.

ಇದನ್ನು ಓದಿ : ಇಲಿಯ ಕಾರಣದಿಂದಾಗಿ ಪಾರ್ಶ್ವವಾಯುವಿಗೆ ತುತ್ತಾದ ಬಾಲಕಿ ; ಅದ್ಹೇಗೆ ಗೊತ್ತಾ.?

*ಮಿಥುನ ರಾಶಿ*
ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ವೇಗಗೊಳಿಸುತ್ತೀರಿ. ನಿಮ್ಮ ಆರೋಗ್ಯ ವಿಷಯದಲ್ಲಿ ಶ್ರದ್ಧೆ ವಹಿಸುತ್ತೀರಿ. ವ್ಯಾಪಾರಗಳು ವಿಶೇಷವಾಗಿ ಲಾಭವನ್ನು ಪಡೆಯುತ್ತವೆ ಮತ್ತು ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು ದೊರೆಯುತ್ತವೆ.

*ಕಟಕ ರಾಶಿ*
ಆತ್ಮೀಯ ಸ್ನೇಹಿತರಿಂದ ದಿಢೀರ್ ಆರ್ಥಿಕ ಲಾಭವಾಗುವ ಸೂಚನೆಗಳಿವೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕವು ವಿಸ್ತಾರಗೊಳ್ಳುತ್ತದೆ. ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಹೊಸ ವಾಹನ ಯೋಗವಿದೆ. ವ್ಯಾಪಾರಗಳಿಗೆ ಲಾಭ ದೊರೆಯುತ್ತದೆ. ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸುತ್ತೀರಿ.

*ಸಿಂಹ ರಾಶಿ*
ಮನೆಯ ಹೊರಗಿನ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಶುಭ ಕಾರ್ಯಕ್ಕೆ ಆಹ್ವಾನಗಳನ್ನು ಸ್ವೀಕರಿಸುತ್ತೀರಿ. ಕೈಗೊಂಡ ವ್ಯವಹಾರಗಳು ಅನುಕೂಲಕರವಾಗಿರುತ್ತದೆ. ದೇವಾಲಯಗಳಿಗೆ ಭೇಟಿ ನೀಡಲಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ.

*ಕನ್ಯಾ ರಾಶಿ*
ಪ್ರಮುಖ ವ್ಯವಹಾರಗಳಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ. ಶ್ರಮದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಸಂಬಂಧಿಕರೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಇರುತ್ತದೆ. ಮಕ್ಕಳ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ವ್ಯಾಪಾರಗಳು ನಿಧಾನವಾಗುತ್ತವೆ. ಉದ್ಯೋಗದಲ್ಲಿ ಸಮಸ್ಯೆಗಳು ಉಂಟಾಗುತ್ತವೆ.

ಇದನ್ನು ಓದಿ : ಬೈಕ್ – ಬೊಲೊರೊ ಡಿಕ್ಕಿ ; ಐವರ ದುರ್ಮರಣ.!

*ತುಲಾ ರಾಶಿ*
ಕೈಗೊಂಡ ಕೆಲಸಗಳಲ್ಲಿ ವಿಘ್ನ ಉಂಟಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಹೆಚ್ಚಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಸ್ವಲ್ಪ ನಿಧಾನವಾಗಿರುತ್ತವೆ. ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ.

*ವೃಶ್ಚಿಕ ರಾಶಿ*
ಬಾಲ್ಯದ ಸ್ನೇಹಿತರಿಂದ ಶುಭ ಸುದ್ದಿ ಸಿಗುತ್ತದೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿರುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ಹೆಚ್ಚು ಲಾಭದಾಯಕವಾಗಿರುತ್ತದೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ.

*ಧನುಸ್ಸು ರಾಶಿ*
ಬಂಧುಗಳಿಂದ ಶುಭ ಸಮಾಚಾರ ಸಿಗುತ್ತದೆ. ಹಠಾತ್ ಪ್ರಯಾಣ ಸೂಚನೆಗಳಿವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ಇರುತ್ತದೆ. ಸ್ಥಿರಾಸ್ತಿ ವಿವಾದಗಳಲ್ಲಿನ ಕಿರಿಕಿರಿಗಳು ದೂರವಾಗುತ್ತವೆ. ವ್ಯಾಪಾರಗಳು ಚೆನ್ನಾಗಿ ನಡೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಫೋರೆಯುತ್ತದೆ.

*ಮಕರ ರಾಶಿ*
ಕೈಗೊಂಡ ವ್ಯವಹಾರಗಳಲ್ಲಿ ತೊಂದರೆಗಳು ಉಂಟಾಗುತ್ತದೆ. ಹಣಕಾಸಿನ ವಹಿವಾಟು ನಿರಾಶಾದಾಯಕವಾಗಿರುತ್ತದೆ. ಸಂಬಂಧಿಕರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳಿರುತ್ತವೆ. ದೂರ ಪ್ರಯಾಣದದಲ್ಲಿ ರಸ್ತೆ ಅಡೆತಡೆಗಳಿರುತ್ತವೆ . ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳು ಸಮಸ್ಯಾತ್ಮಕವಾಗಿರುತ್ತದೆ.

ಇದನ್ನು ಓದಿ : Astrology : ಡಿಸೆಂಬರ್ 18ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಕುಂಭ ರಾಶಿ*
ಹಣಕಾಸಿನ ವ್ಯವಹಾರಗಳಲ್ಲಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಹಠಾತ್ ಪ್ರಯಾಣ ಸೂಚನೆಗಳಿವೆ. ಬಂಧು ಮಿತ್ರರಿಂದ ಒತ್ತಡ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿನ ಸಮಸ್ಯೆಗಳಿಂದ ಮಾನಸಿಕ ನೆಮ್ಮದಿಯ ಕೊರತೆಯಿರುತ್ತದೆ.

*ಮೀನ ರಾಶಿ*
ಪ್ರಮುಖ ಕಾರ್ಯಗಳಲ್ಲಿ ಯಶಸ್ಸು ಸಿಗುತ್ತದೆ. ನ್ಯಾಯಾಲಯದ ವಿವಾದಗಳು ಬಗೆಹರಿಯುತ್ತವೆ. ಆತ್ಮೀಯರಿಂದ ಶುಭ ಸುದ್ದಿ ದೊರೆಯುತ್ತದೆ. ಸ್ಥಿರಾಸ್ತಿ ಖರೀದಿಸುತ್ತೀರಿ. ದೈವಭಕ್ತಿ ಹೆಚ್ಚಾಗುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಶೈಲಿಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

error: Content is protected !!