ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಮೊಬೈಲ್ ಫೋನ್ ಹೆಚ್ಚು ನೋಡಬೇಡಿ ಎಂದು ಪೋಷಕರು ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವತಿ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ.
ವಿಷ ಸೇವಿಸಿದ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಮೇಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.
Read it : Astrology : ಡಿಸೆಂಬರ್ 26ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಧನುಶ್ರೀ ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದಳು, ವಿಷ ಸೇವಿಸಿದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಗುರುವಾರ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಯ ಎರಡನೇ ವರ್ಷದಲ್ಲಿ ಧನುಶ್ರೀ ಓದುತ್ತಿದ್ದಳು. ಧನುಶ್ರೀ ಮೊಬೈಲ್ ಫೋನ್ ಹೆಚ್ಚಾಗಿ ಬಳಸುತ್ತಿದ್ದ ಹಿನ್ನಲೆಯಲ್ಲಿ ಪೋಷಕರು ಮೊಬೈಲ್ ಫೋನ್‌ನ್ನು ಹೆಚ್ಚು ಬಳಸದೆ ಅಭ್ಯಾಸದ ಕಡೆ ಗಮನ ಕೊಡು ಹೇಳಿದ್ದರು. ಇಷ್ಟಕ್ಕೆ ಯುವತಿ ವಿಷ ಸೇವಿಸಿದ್ದಳು.
Recent Comments