ದಾವಣಗೆರೆ : ಮೀಸಲಾತಿ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುವ ಸಂಚು ನಡೆದಿದೆ. ಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮುಗಿಸಲು ಪೊಲೀಸರು ಪ್ಲಾನ್ ಮಾಡಿದ್ದರು. ಸ್ವಾಮೀಜಿ ಮುಗಿಸಿದರೆ ಹೋರಾಟ ಮುಗಿಯುತ್ತದೆ ಎಂದು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದವರ ಮೇಲೆ ನಡೆದ ಲಾಠಿ ಚಾರ್ಜ್ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದರು. ಸುದ್ದಿಗೋಷ್ಠಿ ನಡೆಸಿದ ರೇಣುಕಾಚಾರ್ಯ ಚನ್ನಮ್ಮನ ವಂಶಸ್ಥರ ಮೇಲೆ ನಡೆದ ಲಾಠಿ ಪ್ರಹಾರ ಖಂಡನೀಯ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದನ್ನು ಓದಿ : Astrology : ಡಿಸೆಂಬರ್ 14ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ನಾವು ಪಂಚಮಸಾಲಿ ಸಮುದಾಯದೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಸಮುದಾಯದ ಮೇಲಿನ ಹಲ್ಲೆಯನ್ನು ಎಲ್ಲ ಮಠಾಧೀಶರು ಖಂಡಿಸಬೇಕು. ಪಂಚಮಸಾಲಿ ಸಮಾಜದವರು ತಮ್ಮ ಮೀಸಲಾತಿ ಹಕ್ಕಿಗಾಗಿ ಒತ್ತಾಯಿಸುತ್ತಿದ್ದಾರೆ ಎಂದರು.
ಲಾಠಿ ಚಾರ್ಜ್ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ. ಪರಮೇಶ್ವರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಲಾಠಿ ಚಾರ್ಜ್ ಬದಲು ಮುತ್ತು ಕೊಡಬೇಕಾ ಎಂದು ಹೇಳುತ್ತಾರೆ. ಪ್ರತಿಭಟನಾಕಾರರೇನು ಕಿಸ್ ಮಾಡಲು ಕೇಳಿದ್ದಾರೆಯೇ? ಪ್ರತಿಭಟನಾಕಾರರ ಬಳಿ ಹೋಗಿ ಅವರ ಅಹವಾಲು ಆಲಿಸಬೇಕಿತ್ತು ಎಂದು ಆಕ್ರೋಶ ಹೊರಹಾಕಿದರು.
ಇದನ್ನು ಓದಿ : ತನ್ನನ್ನು ಸಾಕಿದ ಮಾವುತ ಬಿಟ್ಟು ಹೊರಟಾಗ ಆನೆ ಮರಿ ಮಾಡಿದ್ದೇನು ಗೊತ್ತೇ.? ನೋಡಿದ್ರೆ ಭಾವುಕರಾಗೋದು ಗ್ಯಾರಂಟಿ.
ಪ್ರತಿಭಟನೆ ವೇಳೆ RSS ನವರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಖಾಶಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಹತ್ತಿಕ್ಕಲು ಅವರೇ ಕಲ್ಲು ತೂರಾಟ ನಡೆಸಿರಬಹುದು. ಅಧಿಕಾರದ ದುರಾಸೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Recent Comments