ಬೆಳಗಾವಿ : ಬೆಳಗಾವಿಯಲ್ಲಿ ಬುಧವಾರ ನಡೆದ ಯುವಕನ ಮೇಲೆ ಗುಂಡಿನ ದಾಳಿ (attack) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವಕ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ನಡುವೆ ಪೊಲೀಸರು ಘಟನೆಗೆ ಕಾರಣ ಏನು ಎನ್ನುವುದನ್ನು ಪತ್ತೆ ಮಾಡಿದ್ದಾರೆ.
ಬೆಳಗಾವಿ ಆಸ್ಪತ್ರೆಯ ಬೆಡ್ (bed on hospital) ಮೇಲೆ ನರಳಾಡುತ್ತಿರುವ ಯುವಕನಿಂದ ಈಗ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸ್ ಕಮಿಷನರ್ (Police Commissioner) ಹಾಗೂ ತಂಡ ಸಮಗ್ರ ಪ್ರಕರಣದ ಮಾಹಿತಿ ಪಡೆದುಕೊಂಡಿದೆ.
ಬೆಳಗಾವಿಯ ಆಂಜನೇಯ ನಗರ (Anjaneya Nagar) ದಲ್ಲಿ ಬುಧವಾರ ಸಂಜೆ ಟಿಳಕವಾಡಿಯ ದ್ವಾರಕಾನಗರದ ಪ್ರಣಿತ್ ಕುಮಾರ್ (31) ಸ್ನೇಹಿತೆ ಸ್ಮಿತಾ ಮನೆಗೆ ಊಟಕ್ಕೆ ಹೋಗಿದ್ದ. ಊಟ ಮಾಡಬೇಕು ಅಂದುಕೊಳ್ಳುವಷ್ಟರಲ್ಲಿ ಪ್ರಣಿತ್ ಮಾಜಿ ಸ್ನೇಹಿತೆ ಸ್ಮಿತಾಳ ಮನೆಗೆ ಬಂದಿದ್ದಾಳೆ. ಗಂಡ ಸತ್ತ ಸ್ಮಿತಾ ಒಬ್ಬಳೆ ಇದ್ದು ಆಕೆಯ ಮನೆಗೆ ಪ್ರಣಿತ್ ಯಾಕೆ ಬಂದ ಎಂದು ಅನುಮಾನಗೊಂಡು ಪ್ರಣಿತ್ ಜೊತೆಗೆ ಜಗಳಕ್ಕಿಳಿದಿದ್ದಾಳೆ. ಈ ವೇಳೆ ಸ್ಮಿತಾ ಎಂಟ್ರಿಯಾಗಿ ಇಬ್ಬರ ನಡುವಿನ ಜಗಳ ಬಗೆ ಹರಿಸುವ ಕೆಲಸ ಮಾಡಿದ್ದಾಳೆ. ಆದರೆ ಇದು ಇಷ್ಟಕ್ಕೆ ಮುಗಿದಿಲ್ಲ.
ಮಾಜಿ ಪ್ರೇಯಸಿ ಹಿಂದೆ ಹಿಂದೆ ಮತ್ತೆ ಮೂರು ಜನ ಬಂದಿದ್ದಾರೆ. ಪ್ರಣಿತ್ ಮೇಲೆ ಹಲ್ಲೆ ಮಾಡಿ ಜೊತೆಗೆ ತಂದಿದ್ದ ಗನ್ ತೆಗೆದು ಶೂಟ್ ಮಾಡಿದ್ದಾರೆ. ಗುಂಡಿನ ದಾಳಿಯಿಂದ ಪ್ರಣಿತ್ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾನೆ. ಗುಂಡು ಹಣೆ ಭಾಗದಿಂದ ಕಿವಿ ಪಕ್ಕ ಹಾದುಗೋಗಿದೆ. ಇತ್ತ ಆರೋಪಿಗಳು (accused) ಮತ್ತೊಂದು ಬಾರಿ ಗುಂಡಿನ ದಾಳಿ ಮಾಡಿದ್ದು ಅದು ತೊಡೆಯ ಭಾಗಕ್ಕೂ ತಗುಲಿದೆ. ತಕ್ಷಣ ಕುಸಿದು ಪ್ರಣಿತ್ ಕೆಳಗೆ ಬೀಳುತ್ತಿದ್ದಂತೆಯೇ ಮತ್ತೆ ಗುಂಡು ಹಾರಿಸಲು ನೋಡಿದ್ದಾರೆ. ಆಗ ಫೈರ್ ಆಗಿಲ್ಲ. ತಕ್ಷಣ ನಾಲ್ಕು ಆರೋಪಿಗಳು ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದ ಪ್ರಣಿತ್ನನ್ನು ಸ್ಮಿತಾ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಳಮಾರುತಿ ಠಾಣೆ ಪೊಲೀಸರಿಗೆ ವಿಷಯ ಗೊತ್ತಾಗಿದೆ. ಪೊಲೀಸರು ಆಸ್ಪತ್ರೆಗೆ ಬಂದು ಹಲ್ಲೆಗೊಳಗಾದ ಪ್ರಣಿತ್ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ (Yada Martin) ಆಸ್ಪತ್ರೆಗೆ ಭೇಟಿ ನೀಡಿ ಪ್ರಣಿತ್ ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದರು. ಡಿಸಿಪಿ ರೋಹನ್ ಜಗದೀಶ್ (Rohan Jagadish) ಸಾಥ್ ನೀಡಿದ್ದರು.
ಎಸಿಪಿ ನೇತೃತ್ವದ ಎರಡು ತಂಡ ರಚನೆ ಮಾಡಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಬಳಕೆಯಾದ ಗನ್ ಯಾವುದು ಎಂಬುದರ ಕುರಿತ ತನಿಖೆ ಮಾಡುತ್ತೇವೆ. ಪ್ರೀತಿ ವಿಚಾರಕ್ಕೆ ಗಲಾಟೆಯಾಗಿದ್ದು ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದಿದ್ದಾರೆ. ಮಾಳಮಾರುತಿ ಪೊಲೀಸ್ (Malamaruti police station) ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ. ಐಸಿಯುವಿನಲ್ಲಿ ಪ್ರಣಿತ್ಗೆ ಚಿಕಿತ್ಸೆ ಮುಂದುವರಿದಿದೆ.
Recent Comments