ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ.
ಸಾವಿಗೀಡಾದವರು ಖರ್ವಾದ ರಮೇಶ ನಾಯ್ಕ (22), ರಾಘವೇಂದ್ರ ಸೋಮಯ್ಯಗೌಡ (34) ಹಾಗೂ ಸಂಶಿಯ ಗೌರೀಶ ನಾಯ್ಕ (25) ಎಂದು ತಿಳಿದು ಬಂದಿದೆ.
Read it : Astrology : ಡಿಸೆಂಬರ್ 31ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತದೇಹ ಹಸ್ತಾಂತರ ಮಾಡಲಾಗಿದೆ.
Read it : ಮಹಿಳೆಯ ಖಾಸಗಿ ಪೋಟೋ ಇಟ್ಕೊಂಡು ಹಣ ಸುಲಿಗೆ; ರೌಡಿಶೀಟರ್ ವಿರುದ್ಧ FIR.!
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments