ವಿಜಯಪುರ : ವ್ಯಕ್ತಿಯೋರ್ವ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡಿರುವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಈ ರೀತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಾಜು ಹೊಸಮನಿ ಎಂದು ಗುರುತಿಸಲಾಗಿದ್ದು, ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಇದನ್ನು ಓದಿ : Video : ಗ್ಯಾಸ್ ಟ್ಯಾಂಕರ್ ಸ್ಪೋಟ; ಐವರ ಸಾವು.!
ಈ ರಾಜು ಹೊಸಮನಿ ಕೆಲವು ಹಳೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಕಾರಣ ಆತನ ವಿರುದ್ಧ ನ್ಯಾಯಾಲಯದ ವಾರೆಂಟ್ ಇತ್ತು. ಕಳೆದ ಡಿಸೆಂಬರ್ 20 ರಂದು ಶುಕ್ರವಾರ ಕೆಇಬಿ ಬಳಿ ಇವನನ್ನು ಪೊಲೀಸರು ಬಂಧಿಸಿದ್ದರು.
ಬಂಧಿಸಿದ ಬಳಿಕ ಪೊಲೀಸರು ನೇರವಾಗಿ ರಾಜು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಕರೆತಂದರು. ಇದೇ ವೇಳೆ ಆರೋಪಿ ಬ್ಲೇಡ್‌ನಿಂದ ಕತ್ತು ಕೊಯ್ದಿದ್ದಾನೆ.
ಇದನ್ನು ಓದಿ : Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಆದರೆ, ಹರಿತವಾದ ಬ್ಲೇಡ್ ಆರೋಪಿಯೊಬ್ಬನ ಕೈಗೆ ಹೇಗೆ ಬಂತು ಎಂಬುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Recent Comments