ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದುರ್ಘಟನೆ ಇಂದು ನಡೆದಿದೆ.
ಇಂದು (ದಿ.10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 46 ವಿದ್ಯಾರ್ಥಿಗಳ ಪೈಕಿ ನಾಲ್ಕು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಇದನ್ನು ಓದಿ : Astrology : ಡಿಸೆಂಬರ್ 10ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಈ ಕೊಚ್ಚಿ ಹೋದ ನಾಲ್ಕು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರ ಶೋಧ ಕಾರ್ಯ ನಡೆದಿದೆ.
ಈ ದುರ್ಘಟನೆಯಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : ಮಾಜಿ CM ಎಸ್.ಎಂ.ಕೃಷ್ಣ ಸಾವಿನ ಹಿನ್ನಲೆ ನಾಳೆ ಸರ್ಕಾರಿ ರಜೆ ಘೋಷಣೆ.!
ಇಂದು ಸಾಯಂಕಾಲ ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ.
ಇವರಲ್ಲಿ ನಾಲ್ಕು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋದರೆ ಉಳಿದ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
Recent Comments