ಡೆಸ್ಕ್ : ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ (LPG and CNG truck) ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವ ದಹನವಾದ ಘಟನೆ ರಾಜಸ್ಥಾನದ ಜೈಪುರದಲ್ಲಿ (Jaipur in Rajasthan) ನಡೆದಿದೆ ಎಂದು ವರದಿಯಾಗಿದೆ.
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬಂದಿ ಹರಸಾಹಸ ಪಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ (The death toll is likely to rise) ಇದೆ ಎಂದು ವರದಿ ತಿಳಿಸಿದೆ.
Read it : Boyfreindಗಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವತಿಯರು ; ವಿಡಿಯೋ ವೈರಲ್.!
ಈ ಅಪಘಾತದಲ್ಲಿ 12 ರಿಂದ 15 ಜನರು ಗಂಭೀರವಾಗಿ ಗಾಯಗೊಂಡಿದ್ದು (serious injuries), ಅವರನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಅಪಘಾತದ ಕೆಲವು ವಿಡಿಯೋಗಳು ಹೊರಬಿದ್ದಿದ್ದು, ಅದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದು ಸೆರೆಯಾಗಿದೆ.
Read it : Astrology : ಡಿಸೆಂಬರ್ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಸುಟ್ಟಗಾಯಗಳಿಂದ ಬಳಲುತ್ತಿರುವ ಕೆಲವರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಬೆಂಕಿಯು ಹಲವಾರು ಟ್ರಕ್‌ಗಳನ್ನು ಆವರಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಟ್ರಕ್‌ಗಳ ಸಂಖ್ಯೆ ಸ್ಪಷ್ಟವಾಗಿಲ್ಲ.
ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ (Truck lost driver’s control) ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಎನ್‌ಜಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಪೆಟ್ರೋಲ್ ಬಳಿ ನಿಲ್ಲಿಸಿದ್ದ ಇತರ ವಾಹನಗಳಿಗೂ ಬೆಂಕಿ ಹೊತ್ತಿಕೊಂಡು ಆಹುತಿಯಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.
Recent Comments